Breaking News

ಬೆಂಗಳೂರು: ಥಣಿಸಂದ್ರದಲ್ಲಿ ಭೀಕರ ಅಗ್ನಿ ದುರಂತ, ಕೋಟಿ ಕೋಟಿ ಮೌಲ್ಯದ 25ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಭಸ್ಮ!

ಬೆಂಗಳೂರು ಥಣಿಸಂದ್ರದ ಕಾರು ಗ್ಯಾರೇಜ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿ, ಜಾಗ್ವಾರ್, ಆಡಿ, ರೇಂಜ್ ರೋವರ್ ಸೇರಿದಂತೆ 25ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಕರಕಲಾಗಿವೆ. ಗ್ಯಾರೇಜ್‌ನಲ್ಲಿದ್ದ ತೈಲ ಹಾಗೂ ದಹನಕಾರಿ ವಸ್ತುಗಳಿಂದ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಪಕ್ಕದ ಶೆಡ್‌ನಲ್ಲಿದ್ದ 8 ಆಟೋರಿಕ್ಷಾಗಳು ಹಾಗೂ ಸಮೀಪದ ಫ್ಯಾಕ್ಟರಿಗೂ ಹಾನಿಯಾಗಿದೆ. ಘಟನೆಯಲ್ಲಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಐದು ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *