Breaking News

ಅಪ್ರಾಪ್ತ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ

ಬಾಗೇಪಲ್ಲಿ: ತಾಲೂಕಿನಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂದಿಸಿ ಆರೋಪಿಯನ್ನು ಬಾಗೇಪಲ್ಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ನಂದೀಶ್​(27) ಎಂಬಾತ ಬಂಧಿತ. ಪಟ್ಟಣದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಟನೆ ಶನಿವಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ಮೇಲೆ ನಂದೀಶ್​ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು ಸಂತ್ರಸ್ತ ಬಾಲಕಿ ಹೊಟ್ಟೆ ನೋವು ಚಿಕಿತ್ಸೆಗೆ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾಗ ಮಗುವಿಗೆ ಜನ್ಮ ನೀಡಿದ್ದಳು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *