ಬೆಂಗಳೂರು: ನಗರದ ಥಣಿಸಂದ್ರ ಮುಖ್ಯರಸ್ತೆಯಲ್ಲಿರುವ ಕಾರು ಗ್ಯಾರೇಜ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿ, ರೇಂಜ್ ರೋವರ್, ಆಡಿ, ಜಾಗ್ವಾರ್ ಸೇರಿದಂತೆ 25ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಮುಂಜಾನೆ 4.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಗ್ಯಾರೇಜ್ ಪಕ್ಕದ ಶೆಡ್‌ನಲ್ಲಿದ್ದ ಎಂಟು ಆಟೋಗಳು ಹಾಗೂ ಸಮೀಪದ ಯುಪಿವಿಸಿ ಕಿಟಕಿ ಫ್ಯಾಕ್ಟರಿಗೂ ಹಾನಿಯಾಗಿದೆ. ಫ್ಯಾಕ್ಟರಿಯ ಯಂತ್ರ ಮತ್ತು ಗ್ರಾಹಕರ ವಸ್ತುಗಳಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಆರು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಎಸ್‌ಒಸಿಒ ತಂಡ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

