ಬೆಂಗಳೂರು ನಗರದ ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯ ದೂರಿನ ಪ್ರಕಾರ, ಆರೋಪಿ “ನಿನ್ನ ರೇಟ್ ಎಷ್ಟು?” ಎಂದು ಅಸಭ್ಯವಾಗಿ ಪ್ರಶ್ನಿಸಿದ್ದಾನೆ. ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ವಿಡಿಯೋವಾಗಿ ದಾಖಲಿಸಿಕೊಂಡಿದ್ದಾರೆ. ಪೊಲೀಸರಿಗೆ ದೂರು ನೀಡುವುದಾಗಿ ಹೇಳುತ್ತಿದ್ದಂತೆ ಆರೋಪಿ ನಿಂದಿಸಿ, ಬಳಿಕ ಸ್ಥಳದಿಂದ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಮಹಿಳೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಕೂಟರ್‌ನ ನೋಂದಣಿ ಸಂಖ್ಯೆಯನ್ನೂ ಹಂಚಿಕೊಂಡಿರುವ ಅವರು, ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

