Breaking News

ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ!

ಬೆಂಗಳೂರು ಯಶವಂತಪುರದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯ ಮಾತು ನಂಬಿ, ಲಂಡನ್‌ನಿಂದ ದುಬಾರಿ ಸೀರೆ ಹಾಗೂ ವಜ್ರಾಭರಣಗಳ ಗಿಫ್ಟ್ ಬರುತ್ತದೆ ಎಂಬ ಆಸೆಗೆ ಬಿದ್ದು ₹1.75 ಕೋಟಿ ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಮೊದಲು ₹40 ಲಕ್ಷ ನಗದನ್ನು ಹೋಟೆಲ್‌ನಲ್ಲಿ ಅಪರಿಚಿತ ವ್ಯಕ್ತಿಗೆ ನೀಡುವಂತೆ ಖದೀಮ ಸೂಚಿಸಿದ್ದ. ಬಳಿಕ ಕಸ್ಟಮ್ಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ, ಜಿಎಸ್‌ಟಿ, ಆಮದು ಸುಂಕ ಹಾಗೂ ದಂಡದ ಹೆಸರಿನಲ್ಲಿ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ಹಣ ವರ್ಗಾಯಿಸಿಸಿಕೊಂಡಿದ್ದಾರೆ. ಪಾರ್ಸೆಲ್ ತಲುಪದೇ, ಸಂಪರ್ಕದಲ್ಲಿದ್ದವರ ಫೋನ್‌ಗಳು ಸ್ವಿಚ್ ಆಫ್ ಆದ ಬಳಿಕ ಮಹಿಳೆಗೆ ವಂಚನೆ ನಡೆದಿರುವುದು ಗೊತ್ತಾಗಿದೆ. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲೂ ಬೈಕ್ ಸವಾರನ ಕುತ್ತಿಗೆ ಸೀಳಿದ ಮಾರಕ ಮಾಂಜಾ ದಾರ

ಬೆಂಗಳೂರು: ನಿಷೇಧಿತ ಚೈನೀಸ್ ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರರೊಬ್ಬರ ಕುತ್ತಿಗೆ ಭೀಕರವಾಗಿ ಸೀಳಿರುವ ಘಟನೆ ಹೆಗಡೆನಗರದ ಫ್ಲೈ ಓವರ್ …

Leave a Reply

Your email address will not be published. Required fields are marked *