Breaking News

ಐಷಾರಾಮಿ ಕಾರುಗಳ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ವಂಚನೆ: ನಾಲ್ವರು ಆರೋಪಿಗಳ ಬಂಧನ!

ಬೆಂಗಳೂರು ಆಡುಗೋಡಿ ಠಾಣೆ ಪೊಲೀಸರು ಐಷಾರಾಮಿ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ಜಾಲವನ್ನು ಭೇದಿಸಿ, ಪ್ರಭಾಕರ್, ಪ್ರಶಾಂತ್, ವೇಣುಗೌಡ ಹಾಗೂ ಭಾಗೇಶ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹1.74 ಕೋಟಿ ಮೌಲ್ಯದ 7 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕಾರು ಬ್ರೋಕರ್‌ಗಳಾಗಿ ಪರಿಚಯಿಸಿಕೊಂಡು, ಅಡಮಾನವಿಟ್ಟ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಅಥವಾ ಆರ್‌ಸಿ ಕಾರ್ಡ್‌ನಲ್ಲಿ ಹೆಸರು ಬದಲಾಯಿಸಿ, ಅದೇ ಕಾರುಗಳನ್ನು ಮತ್ತೆ ಬೇರೆಡೆ ಹೆಚ್ಚಿನ ಮೊತ್ತಕ್ಕೆ ಅಡಮಾನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸರಣಿಯಾಗಿ ಹಲವು ಮಂದಿಗೆ ವಂಚನೆ ಎಸಗಿರುವ ಈ ಪ್ರಕರಣದಲ್ಲಿ ಕಾರುಗಳ ನಿಜವಾದ ಮಾಲೀಕರನ್ನು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯ ಮೇರೆಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *