ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸೋಮವಾರ ನಡೆದ ಭೀಕರ ಸರಣಿ ಅಪಘಾತದಲ್ಲಿ ಪಿಕಪ್ ವಾಹನ ಚಾಲಕ ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಕ್ಕುಮ್ಮನಹಳ್ಳಿ ನಿವಾಸಿಯಾಗಿದ್ದ ಪ್ರಸಾದ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರೀಪ್ ಪೀಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಏಕಾಏಕಿ ಫೇಲ್ ಆದ ಪರಿಣಾಮ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಪಿಕಪ್ ಓಮಿನಿ ಕಾರಿಗೆ, ಓಮಿನಿ ಗ್ಯಾಸ್ ಲಾರಿ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ವಾಹನಗಳು ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

