ಮೈಸೂರು: ಪಬ್ಲಿಕ್ ಟಿವಿಯ ಕಾರ್ಯಕ್ರಮದಲ್ಲಿ ಮೀಸಲಾತಿ ಹಾಗೂ ಅದರ ಫಲಾನುಭವಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ, ನಿರೂಪಕ ಅರುಣ್ ಬಡಿಗೇರ್ ಹಾಗೂ ವಾಹಿನಿಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಜುಲೈ 25ರಂದು ಪ್ರಸಾರವಾದ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮೀಸಲಾತಿ ವ್ಯವಸ್ಥೆ, ಶಿಕ್ಷಕರು, ವೈದ್ಯರು ಹಾಗೂ ಇಂಜಿನಿಯರ್‌ಗಳ ಗುಣಮಟ್ಟದ ಕುರಿತು ನೀಡಿದ ಹೇಳಿಕೆಗಳು ಸಮಾಜದಲ್ಲಿ ಪೂರ್ವಾಗ್ರಹ ಮತ್ತು ನಕಾರಾತ್ಮಕ ಅಭಿಪ್ರಾಯ ಮೂಡಿಸುವಂತಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಮತ್ತು ಅದರ ಫಲಾನುಭವಿಗಳ ಘನತೆಗೆ ಧಕ್ಕೆ ಉಂಟುಮಾಡುವ ರೀತಿಯ ಹೇಳಿಕೆಗಳಾಗಿದ್ದು, ನಿರೂಪಕರ ಜೊತೆಗೆ ಕಾರ್ಯಕ್ರಮ ಪ್ರಸಾರಕ್ಕೆ ಅನುಮೋದನೆ ನೀಡಿದ ಪಬ್ಲಿಕ್ ಟಿವಿ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ಪಾತ್ರವನ್ನೂ ತನಿಖೆ ನಡೆಸುವಂತೆ ದೂರುದಾರರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

