ಉತ್ತರ ಪ್ರದೇಶದ ಮಥುರಾದಲ್ಲಿ ಮೂರು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಂದ ಆರೋಪದಡಿ 32 ವರ್ಷದ ಮಹಿಳೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಿಯಕರನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಮಗು ನಿರಂತರವಾಗಿ ಅಳುತ್ತಿದ್ದ ಕಾರಣ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರಂಭದಲ್ಲಿ ಮಗುವಿನ ಸಾವು ಅಸ್ವಸ್ಥತೆಯಿಂದಾಗಿದೆ ಎಂದು ಕುಟುಂಬ ಭಾವಿಸಿ ಅಂತ್ಯಸಂಸ್ಕಾರ ನೆರವೇರಿಸಿತ್ತು. ಬಳಿಕ ಮಹಿಳೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಗುವಿನ ಸಾವಿನ ಬಗ್ಗೆ ಮಾತನಾಡಿದ್ದನ್ನು ಪತಿ ಕೇಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಗುವಿನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ವರದಿ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

