ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಸಂಘಟಕರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಇಲ್ಲವಾದರೆ ದೇಶಾದ್ಯಂತ ಮತ್ತೆ ಬೃಹತ್ ಪ್ರತಿಭಟನೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ. ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಎಫ್‌ಐಆರ್ ಹಿಂಪಡೆಯುವ ಭರವಸೆ ನೀಡಲಾಗಿತ್ತು. ಆದರೆ ಹಲವು ರಾಜ್ಯಗಳಲ್ಲಿ ಇನ್ನೂ ವಿದ್ಯಾರ್ಥಿಗಳ ಬಂಧನ ಮತ್ತು ಕಿರುಕುಳ ಮುಂದುವರಿದಿದೆ ಎಂದು ಸಿಜೆಪಿ ಆರೋಪಿಸಿದೆ. ಈ ಕುರಿತು ಲಿಖಿತ ಭರವಸೆ ನೀಡುವಂತೆ ಆಗ್ರಹಿಸಿದೆ. ಇದರ ಜೊತೆಗೆ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವುದು, ನೀಟ್ ಅಕ್ರಮದಲ್ಲಿ ಮೃತಪಟ್ಟ ಅಭ್ಯರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡುವುದು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆಂಬ ಬೇಡಿಕೆಗಳನ್ನು ಸಿಜೆಪಿ ಮುಂದಿಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

