ಬೆಂಗಳೂರು: ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಗೇಟ್ ಸಮೀಪ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು, ತಲೆ ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿ ಎಸೆದಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯ ಸ್ಥಳದಲ್ಲಿ ತಲೆ ಮಾತ್ರ ಪತ್ತೆಯಾಗಿದ್ದು, ಉಳಿದ ದೇಹದ ಭಾಗಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ, ಹಳೆಯ ವೈಷಮ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿರುವ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ. ಈ ಘಟನೆ ವರ್ತೂರು ಪ್ರದೇಶದಲ್ಲಿ ಆತಂಕ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

