Breaking News

ಬಾಲಕಿಗೆ ನಕಲಿ ಪಿಸ್ತೂಲ್ ತೋರಿಸಿ ದರೋಡೆ:ಇಬ್ಬರ ಸೆರೆ; ₹25 ಲಕ್ಷ ಮೌಲ್ಯದ ಆಭರಣ ವಶ

ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಗೆ ನಕಲಿ ಲೈಟರ್ ಪಿಸ್ತೂಲ್ ತೋರಿಸಿ ಹಲ್ಲೆ ನಡೆಸಿ, ಚಾಕುವಿನಿಂದ ಬೆದರಿಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಜೆ.ಜೆ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹25 ಲಕ್ಷ ಮೌಲ್ಯದ 139 ಗ್ರಾಂ ಚಿನ್ನಾಭರಣ, ₹8 ಲಕ್ಷ ನಗದು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 6ರಂದು ತಾಯಿ ಹೊರಗಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಬಾಲಕಿಯ ತಲೆಗೆ ನಕಲಿ ಪಿಸ್ತೂಲ್‌ನಿಂದ ಹೊಡೆದು ಗಾಯಗೊಳಿಸಿ, ಬೀರುವಿನಲ್ಲಿದ್ದ 199.71 ಗ್ರಾಂ ಚಿನ್ನಾಭರಣ ಮತ್ತು ₹2 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ತಾಯಿ ಮನೆಗೆ ಬಂದ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಹಳೆಗುಡ್ಡದಹಳ್ಳಿ ಸಮೀಪ ಇಬ್ಬರನ್ನು ಬಂಧಿಸಿ, ಅವರ ಮನೆಯಿಂದ 34 ಗ್ರಾಂ ಚಿನ್ನದ ಗಟ್ಟಿ ಸೇರಿದಂತೆ ಒಟ್ಟು 139 ಗ್ರಾಂ ಚಿನ್ನಾಭರಣ ಮತ್ತು ₹8 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಮನೆ ಖರೀದಿಗಾಗಿ ಸಂಗ್ರಹಿಸಿದ್ದ ಹಣ ಮತ್ತು ಚಿನ್ನವನ್ನು ಬೀರುವಿನಲ್ಲಿ ಇರಿಸಲಾಗಿತ್ತು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *