ಬೆಂಗಳೂರು: ಬಸ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸಂಜಯನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ಗಂಗಮ್ಮನಗುಡಿ ಸರ್ಕಲ್‌ನಲ್ಲಿ ನಡೆದಿದೆ. ಜಾಲಹಳ್ಳಿಗೆ ತೆರಳಲು ಬಸ್ ಹತ್ತಿದ್ದ ವೇಳೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮಾತಿನ ಚಕಮಕಿ ಉಂಟಾಗಿ, ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಬಸ್ ಗಂಗಮ್ಮನಗುಡಿ ಸರ್ಕಲ್ ತಲುಪುತ್ತಿದ್ದಂತೆ ಯುವಕರ ಗುಂಪು ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದು, ತಾನು ಪೊಲೀಸ್ ಎಂದು ಹೇಳಿದರೂ ಬಿಡದೆ ಬಟ್ಟೆ ಹರಿದು ಥಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

