Breaking News

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ; ಕಾಲೇಜಿಗೆ ನುಗ್ಗಿ ಸ್ವಂತ ಮಗಳಿಗೆ ಚಾಕು ಇರಿದ ಪಾಪಿ ತಂದೆ

ಬೆಂಗಳೂರು: ರಾಜಾನುಕುಂಟೆಯ ಖಾಸಗಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆಕೆಯ ತಂದೆಯೇ ಕಾಲೇಜಿನೊಳಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ಯುವತಿಯನ್ನು ಲಕ್ಷ್ಮೀ ದುರ್ಗಾ ಎಂದು ಗುರುತಿಸಲಾಗಿದ್ದು, ಜುಲೈ 25ರಂದು ಮಧ್ಯಾಹ್ನ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ಮಗಳನ್ನು ಭೇಟಿಯಾಗುವ ನೆಪದಲ್ಲಿ ಬಂದ ತಂದೆ ನಾಗೇಂದ್ರ, ಕ್ಯಾಬಿನ್‌ಗೆ ನುಗ್ಗಿ ಹೊಟ್ಟೆ, ಎದೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗೇಂದ್ರನ ಬಂಧನಕ್ಕಾಗಿ ಶೋಧ ಮುಂದುವರಿದಿದೆ. ದಾಳಿಯ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *