Breaking News

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 60ಕ್ಕೂ ಹೆಚ್ಚು ಜಾನುವಾರು ರಕ್ಷಣೆ; ಓರ್ವ ಕ್ಲೀನರ್ ಬಂಧನ, ಇಬ್ಬರು ಚಾಲಕರು ಪರಾರಿ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 64 ಜಾನುವಾರುಗಳನ್ನು ಕವಲಂದೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮೈಸೂರಿನ ಸಯ್ಯದ್ ಜಾವಿದ್ (43) ಎಂಬಾತನನ್ನು ಬಂಧಿಸಲಾಗಿದ್ದು, ಇಬ್ಬರು ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಾತ್ಮಿದಾರರಿಂದ ದೊರೆತ ಮಾಹಿತಿಯ ಮೇರೆಗೆ ಪಿಎಸ್‌ಐ ಬಿ. ಬಸವರಾಜು ನೇತೃತ್ವದ ತಂಡ ನಂಜನಗೂಡು–ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಿತು. ಈ ವೇಳೆ ಎರಡು ಈಚರ್ ಕ್ಯಾಂಟರ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಒಟ್ಟು 64 ಜಾನುವಾರುಗಳನ್ನು ಅಮಾನವೀಯವಾಗಿ ತುಂಬಿ ಸಾಗಿಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರುಗಳನ್ನು ಪ್ರಾಣಿ ಹಿಂಸೆ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಬಸವರಾಜು, ಲಿಂಗರಾಜು ಎಂ. ಹಾಗೂ ರಮೇಶ್ ಭಾಗವಹಿಸಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *