Breaking News

ಲೋಕಾಪುರ ಡಿಸಿಸಿ ಬ್ಯಾಂಕ್​​ನಲ್ಲಿ ಗೋಲ್​ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಗುರುರಾಜ್ ಶಿವರಾಜ್ ₹65 ಲಕ್ಷ ದುರ್ಬಳಕೆ ಮಾಡಿಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗುರುರಾಜ್ ಕಳೆದ 12 ವರ್ಷಗಳಿಂದ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 31ರಂದು ಬ್ಯಾಂಕ್‌ನ ಎಸ್‌ಬಿಐ ಖಾತೆಯಿಂದ ತಮ್ಮ ವೈಯಕ್ತಿಕ ಐಡಿಎಫ್‌ಸಿ ಬ್ಯಾಂಕ್ ಖಾತೆಗೆ ₹65 ಲಕ್ಷ ವರ್ಗಾಯಿಸಿಕೊಂಡು ವಂಚನೆ ಎಸಗಿರುವುದು, ಅವರು ದೀರ್ಘ ರಜೆಗೆ ತೆರಳಿದ ಬಳಿಕ ಹೊಸ ಮ್ಯಾನೇಜರ್ ಅಧಿಕಾರ ವಹಿಸಿಕೊಂಡಾಗ ಬೆಳಕಿಗೆ ಬಂದಿದೆ. ಕಳೆದ ಹಲವು ವಾರಗಳಿಂದ ಬ್ಯಾಂಕ್‌ಗೆ ಗೈರಾಗಿದ್ದ ಗುರುರಾಜ್, ನಾಲ್ಕು ದಿನಗಳಿಂದ ಮೊಬೈಲ್‌ನ್ನೂ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ. ಇದೇ ಡಿಸಿಸಿ ಬ್ಯಾಂಕ್‌ನ ಅಮೀನಗಢ ಮತ್ತು ಕಮತಗಿ ಶಾಖೆಗಳಲ್ಲಿ ಈ ಹಿಂದೆ ₹12 ಕೋಟಿ ಹಗರಣ ನಡೆದಿದ್ದ ಹಿನ್ನೆಲೆ, ಮತ್ತೆ ವಂಚನೆ ಬೆಳಕಿಗೆ ಬಂದಿರುವುದು ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *