Breaking News

ಬೆಂಗಳೂರಿನಲ್ಲಿ ಖತರ್ನಾಕ್‌ ಕಳ್ಳ; ವಿಶೇಷ ಚೇತನನಂತೆ ನಟಿಸಿ ಭಿಕ್ಷಾಟನೆ, ಐಫೋನ್‌ ಕಳವು: ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ವ್ಯಕ್ತಿಯೊಬ್ಬ ಅಂಗವೈಕಲ್ಯ ಹೊಂದಿರುವಂತೆ ನಟಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಾಕಿಂಗ್ ಸ್ಟಿಕ್ ಹಿಡಿದು ಭಿಕ್ಷೆ ಬೇಡುತ್ತಿದ್ದ ಆತನ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪ್ರಶ್ನಿಸಿದಾಗ, ಸ್ಟಿಕ್ ಬಿಟ್ಟು ಯಾವುದೇ ತೊಂದರೆಯಿಲ್ಲದೆ ನಡೆದು ಹೋಗಿರುವುದು ವೈರಲ್ ವಿಡಿಯೊದಲ್ಲಿ ಕಂಡುಬಂದಿದೆ. ಸ್ಥಳೀಯರ ವಿಚಾರಣೆಯಲ್ಲಿ ಆತ ಸುಳ್ಳು ಹೇಳಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನಕಲಿ ಭಿಕ್ಷಾಟನೆ ಜಾಲದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆದರೆ ವಿಡಿಯೊದಲ್ಲಿನ ಘಟನೆ ಮತ್ತು ವ್ಯಕ್ತಿಯ ಗುರುತು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *