ಕಲಬುರಗಿಯ ಬಿದ್ದಾಪುರ ಕಾಲೊನಿಯ ಬೀರಲಿಂಗೇಶ್ವರ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಕಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಅಶೋಕನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸೈಯದ್ ಜಿಲಾನ್ ಅಲಿಯಾಸ್ ರೇತಿ ಬಾಬಾ (36) ಹಾಗೂ ಜಾವೇದ್ ಪಟೇಲ್ (35) ಎಂದು ಗುರುತಿಸಲಾಗಿದ್ದು, ಅವರಿಂದ ನಕಲಿ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಜುಲೈ 22ರಂದು ಬಾರ್‌ನಲ್ಲಿ ಗುಟ್ಕಾ ಉಗುಳಿದ ವಿಚಾರವಾಗಿ ಬಾರ್ ಮಾಲೀಕರ ಸಹೋದರನೊಂದಿಗೆ ಮಾತಿನ ಚಕಮಕಿ ನಡೆದು, ಬಳಿಕ ಆರೋಪಿಗಳು ನಕಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಕೊಲೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಶೋಕನಗರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

