Breaking News

ಬಂಟ್ವಾಳ | ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿಯಲ್ಲಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದವರು ಏಲ್ಮಾ ಪ್ರಶ್ಚಿತಾ ಬರೆಟ್ಟೋ (23), ಚರಣ್ ಕುಮಾರ್ (31) ಹಾಗೂ ಸತೀಶ್ ಎ.ಆರ್. (28). 2021ರ ಜನವರಿ 25ರಂದು ಆರೈಕೆ ಮಾಡುತ್ತಿದ್ದ ವೃದ್ಧೆ ಬೆನೆಡಿಕ್ಟ್ ಕಾರ್ಲೋ ಅವರ ಚಿನ್ನಾಭರಣ ದೋಚುವ ಉದ್ದೇಶದಿಂದ ಆರೋಪಿಗಳು ಮೊದಲು ಆಹಾರದಲ್ಲಿ ವಿಷ ಬೆರೆಸಿದ್ದು, ಅದು ಫಲಿಸದ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಬಳಿಕ ಸುಮಾರು 61.070 ಗ್ರಾಂ ತೂಕದ, ಅಂದಿನ ಮೌಲ್ಯ ಸುಮಾರು ₹3 ಲಕ್ಷದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳ ಆಧಾರದಲ್ಲಿ ನ್ಯಾಯಾಲಯ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *