Breaking News

ಪ್ರೇಮ ಪಕರಣ: ತುಮಕೂರಿನಲ್ಲಿ ಮಾಜಿ ರೌಡಿಶೀಟರ್ ಭೀಕರ ಹತ್ಯೆ

ತುಮಕೂರಿನ ಬೆಳಗುಂಬ ರಸ್ತೆಯಲ್ಲಿ ನಡೆದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಜಿಮ್ ಮಾಲೀಕ ಚೇತನ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೃತನ ಅಕ್ಕನ ಮಗಳೊಂದಿಗೆ ಜಿಮ್ ಮಾಲೀಕ ಹೊಂದಿದ್ದ ಅಕ್ರಮ ಸಂಬಂಧವೇ ಹತ್ಯೆಗೆ ಪ್ರಮುಖ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಜುಲೈ 26ರಂದು ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವೀರಣ್ಣನನ್ನು ಕಾರಿನಿಂದ ಡಿಕ್ಕಿ ಹೊಡೆದು ಕೆಡವಿ, ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ತನಿಖೆಯಲ್ಲಿ ಚೇತನ್ ತನ್ನ ಮೂವರು ಸಹಚರರೊಂದಿಗೆ ಸಂಚು ರೂಪಿಸಿ ಮೈಸೂರಿನಿಂದ ಯುವಕರನ್ನು ಕರೆಸಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಚೇತನ್ (26), ಸಂದೀಪ್ (32), ಕುಮಾರ್ (22) ಮತ್ತು ಶಿವಕುಮಾರ್ (22) ಎಂದು ಗುರುತಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಅವರನ್ನು ಕಸ್ಟಡಿಗೆ ಪಡೆಯಲು ಮುಂದಾಗಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *