Breaking News

ಡಿಕೆಶಿ ಆಪ್ತ ಸಹಾಯಕನೆಂದು ವಂಚಿಸಿದ್ದವನ ಬಂಧನ

ಶಿವಮೊಗ್ಗದಲ್ಲಿ ತಾನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್ ಪರವಾನಗಿ ಕೊಡಿಸುವುದಾಗಿ ನಂಬಿಸಿ ರೈತನಿಂದ ₹15 ಲಕ್ಷ ಪಡೆದು ವಂಚನೆ ಮಾಡಿದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಎಂದು ಗುರುತಿಸಲಾಗಿದೆ. ರೈತ ಮಂಜುನಾಥ ಹಂಜಿ ಅವರಿಂದ ಫೋನ್‌ಪೇ ಹಾಗೂ ನಗದು ರೂಪದಲ್ಲಿ ಹಂತ ಹಂತವಾಗಿ ₹15 ಲಕ್ಷ ಪಡೆದು, ಪರವಾನಗಿ ನೀಡದೇ ಹಣದೊಂದಿಗೆ ತಲೆಮರೆಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದೇ ರೀತಿಯಲ್ಲಿ ಇತರರಿಗೂ ವಂಚನೆ ನಡೆಸಿದ್ದಾನೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *