ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಪ್ರೀತಿಸುವುದಾಗಿ ನಂಬಿಸಿ ಹಲವು ತಿಂಗಳು ದೈಹಿಕ ಸಂಪರ್ಕ ಬೆಳೆಸಿದ ಆರೋಪದ ಮೇಲೆ 22 ವರ್ಷದ ಚನ್ನಬಸವ ತುಪ್ಪದನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ಎರಡು-ಮೂರು ತಿಂಗಳಿಂದ ಋತುಚಕ್ರವಾಗದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

