Breaking News

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಕೊಂದು ಶವ ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪತಿ ಪರಾರಿ.!

ರಾಜಧಾನಿ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಪತ್ನಿಯನ್ನು ಹತ್ಯೆಗೈದು, ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಮೃತಳನ್ನು ರೀಮಾ ಕುಮಾರಿ (20) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದಾನೆ. ಮೂಲತಃ ಬಿಹಾರದವರಾದ ದಂಪತಿ ಉದ್ಯೋಗಕ್ಕಾಗಿ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ದಂಪತಿ ನಡುವೆ ಜಗಳವಾಗಿದ್ದು, ಇದೇ ವೇಳೆ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ನೇಹಿತೆ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆದು ನೋಡಿದಾಗ ಶವ ಪತ್ತೆಯಾಗಿದೆ. ಕುಂಬಳಗೋಡು ಪೊಲೀಸರು ಪ್ರಕರಣ ದಾಖಲಿಸಿ, ಪರಾರಿಯಾಗಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಕೊಲೆಗೆ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *