Breaking News

ನಾಮಕರಣಕ್ಕೆ ತಡವಾಗಿ ಬಂದ ಪತ್ನಿ: 11 ತಿಂಗಳ ಮಗುವನ್ನೇ ನೆಲಕ್ಕೆ ಎಸೆದ ಪಾಪಿ ಪತಿ!

ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ಪತ್ನಿ ಮತ್ತು ಆಕೆಯ ಕುಟುಂಬ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ತಂದೆಯೊಬ್ಬ, ತನ್ನ 11 ತಿಂಗಳ ಹೆಣ್ಣು ಮಗುವನ್ನು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆರೋಪಿ ವಿನಾಯಕ್ ಕಾರ್ಯಕ್ರಮದಲ್ಲೇ ಪತ್ನಿ, ಮಾವ ಹಾಗೂ ಗಲಾಟೆ ತಡೆಯಲು ಬಂದ ಹೋಟೆಲ್ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಪತ್ನಿ ರಮ್ಯಾ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಬಿಎನ್‌ಎಸ್ ಹಾಗೂ ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ವಿನಾಯಕ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *