Breaking News

ಚಿತ್ರದುರ್ಗ ವಸತಿ ಶಾಲೆಯಲ್ಲಿದ್ದ ಅಪ್ರಾಪ್ತೆಗೆ ಗಂಡು ಮಗು ಜನನ ; ಪ್ರಿಯಕರನ ವಿರುದ್ಧ ಪೋಕ್ಸೊ ಕೇಸ್ ದಾಖಲು

ಚಿತ್ರದುರ್ಗ: ಪ್ರೀತಿಯ ಸಂಬಂಧದಲ್ಲಿದ್ದ 17 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿ, ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಿಯಕರ ಪರಾರಿಯಾಗಿದ್ದಾನೆ. ಬಾಲಕಿ ವಸತಿ ನಿಲಯದಲ್ಲಿ ವಾಸವಿದ್ದು ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಗರ್ಭಿಣಿಯಾಗಿರುವುದು ತಿಳಿದ ಬಳಿಕ ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ಹೆರಿಗೆಯ ನಂತರ ಆಸ್ಪತ್ರೆ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರಕು ವಾಹನ ಚಾಲಕ ಕರಿಯಣ್ಣ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಹಿರಿಯೂರು ನಗರ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *