Breaking News

ಬರೋಬರಿ 120 ಎಕರೆ ಜಮೀನು ಖರೀದಿಸಿದ್ದ “ಸಾಹುಕಾರ್” – ಮತ್ತೊಂದು ದೂರು ದಾಖಲು!

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮರಿಲಿಂಗಗೌಡ ಮಾಲಿಪಾಟೀಲ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನ ಪ್ರಕಾರ, 2023–24ರ ಅವಧಿಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಹುಕಾರ್ ಕುಟುಂಬವು ಸುಮಾರು 120 ಎಕರೆ ಕೃಷಿ ಹಾಗೂ ವಾಣಿಜ್ಯ ಭೂಮಿಯನ್ನು ಖರೀದಿಸಿದೆ. ಪತ್ನಿ ವಿಜಯಲಕ್ಷ್ಮೀ ಹೆಸರಿನಲ್ಲೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನೋಂದಣಿಯಾಗಿದ್ದು, ಅವರ ಆದಾಯದ ಮೂಲವೇನು ಎಂಬ ಪ್ರಶ್ನೆ ಎದ್ದಿದೆ. ಈ ಸಂಬಂಧ ಸಾಹುಕಾರ್ ಅವರ ಆಸ್ತಿ ಸಂಪೂರ್ಣ ತನಿಖೆಗೆ ಒಳಪಡಿಸಿ, ಅಕ್ರಮ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *