ಚಿಕ್ಕಮಗಳೂರಿನಲ್ಲಿ ಬೋವಿ ಸಮುದಾಯದ ಪೂಜ್ಯ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಠ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವಿವಾದದ ವೇಳೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆ ಬೋವಿ ಸಮುದಾಯದ ಮುಖಂಡರು ಹಾಗೂ ಭಕ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ಸಂಬಂಧ 6 ಜನರ ವಿರುದ್ಧ ವಿವಿಧ ಕಾಯ್ದೆಗಳಡಿ ಎಫ್‌ಐಆರ್ ದಾಖಲಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

