Breaking News

ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹತ್ಯೆ

ಮಂಡ್ಯ ಜಿಲ್ಲೆಯ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಸಾಲದ ಒತ್ತಡ ಹಾಗೂ ಬೆಳೆ ಕೈಕೊಟ್ಟ ಹಿನ್ನೆಲೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಮೃತಪಟ್ಟವರು. ಸುಮಾರು 5 ಎಕರೆ ಜಮೀನು ಹೊಂದಿದ್ದ ಪುಟ್ಟಸ್ವಾಮಿ ಸಾಲದ ಹೊರೆ ಹಾಗೂ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಮನನೊಂದು ಇಬ್ಬರೂ ಜಮೀನಿನ ಸಮೀಪದ ಆಲದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಶಿವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *