Breaking News

ಸಿಎಂ ಡಿಕೆ ಶಿವಕುಮಾರ್ ಪಿಎ ಎಂದು 15 ಲಕ್ಷ ರೂಪಾಯಿ ಪಡೆದು ವಂಚನೆ : ಓರ್ವ ಅರೆಸ್ಟ್!

ಶಿವಮೊಗ್ಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ಆರೋಪಿ ಮೊದಲು ದೂರುದಾರ ಮಂಜುನಾಥ್ ಹಂಜಿ ಅವರೊಂದಿಗೆ ಸ್ನೇಹ ಬೆಳೆಸಿ, ತಾನು ಡಿಸಿಎಂ ಪಿಎ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ, ಹಂತ ಹಂತವಾಗಿ 15 ಲಕ್ಷ ರೂಪಾಯಿ ಪಡೆದುಕೊಂಡಿದ್ದ. ಹಣ ಪಡೆದ ಬಳಿಕ ಲೈಸೆನ್ಸ್ ಕೊಡಿಸದೇ ಮೂರು ತಿಂಗಳ ಕಾಲ ನೆಪ ಹೇಳುತ್ತಾ ಕಾಲಹರಣ ಮಾಡಿದ್ದ. ಅನುಮಾನಗೊಂಡ ಮಂಜುನಾಥ್ ಹಂಜಿ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *