Breaking News

ಎಸ್‍ಐಆರ್ ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ; ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಸ್ತಗೀರ್ ಮತ್ತು ಯಾರಬ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕಾಗಿ ತೆರಳಿದ್ದ ಅಧಿಕಾರಿಗಳ ಬಳಿ ದಸ್ತಗೀರ್ ಎಸ್‌ಐಆರ್ ಫಾರ್ಮ್ ನೀಡುವಂತೆ ಒತ್ತಾಯಿಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿದ್ದರಿಂದ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರೆಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಯಾರಬ್ ಕರ್ತವ್ಯನಿರತ ಅಧಿಕಾರಿ ಫಕೀರಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅಧಿಕಾರಿಗೆ ಚಿಕಿತ್ಸೆ ನೀಡಲಾಗಿದ್ದು, ದೂರಿನ ಆಧಾರದ ಮೇಲೆ ಡಿಜೆ ಹಳ್ಳಿ ಪೊಲೀಸರು ಇಬ್ಬರನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *