ಬೆಂಗಳೂರು ಜಾಲಹಳ್ಳಿ ವ್ಯಾಪ್ತಿಯ ಎಂಇಎಸ್ ರಿಂಗ್ ರಸ್ತೆಯಲ್ಲಿ ವಾಹನಗಳ ಟೈರ್ ಪಂಚರ್ ಆಗುವಂತೆ ಉದ್ದೇಶಪೂರ್ವಕವಾಗಿ ರಸ್ತೆಗೆ ಮೊಳೆಗಳನ್ನು ಚೆಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದ ಇಬ್ಬರು ಪಂಚರ್ ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಆರೋಪಿಗಳು ಬೈಕ್‌ನಲ್ಲಿ ಬಂದು ರಸ್ತೆಯುದ್ದಕ್ಕೂ ಮೊಳೆಗಳನ್ನು ಚೆಲ್ಲುತ್ತಿದ್ದರು. ಬಳಿಕ ಪಂಚರ್ ಆದ ವಾಹನಗಳಿಗೆ ನೆರವು ನೀಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸಾರ್ವಜನಿಕರ ದೂರುಗಳ ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಗಳ ಕೃತ್ಯವನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ದಂಧೆಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

