ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಶೂಟ್‌ಔಟ್‌ನಲ್ಲಿ 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಘಟನೆ ಹೋಲಿ ರೋಜರಿ ಚರ್ಚ್ ಸಮೀಪ ಬೆಳಗಿನ ಜಾವ ನಡೆದಿದೆ. ಅಪರಿಚಿತ ದುಷ್ಕರ್ಮಿ ಗುಂಡು ಹಾರಿಸಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಹಣಕಾಸಿನ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

