Breaking News

ಸಹೋದ್ಯೋಗಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ – ಸರ್ಕಾರಿ ಅಧಿಕಾರಿಯ ಕಾಮಲೀಲೆ ಬಹಿರಂಗ!

ತುಮಕೂರು ಜಿಲ್ಲೆಯ ಪಾವಗಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಗೋಪಾಲಪ್ಪ ವಿರುದ್ಧ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಂಪ್ಯೂಟರ್ ಆಪರೇಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕೆಲಸವನ್ನು ಖಾಯಂ ಮಾಡಿಸುವ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾಗಿ ದೂರಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 74 ಹಾಗೂ 351(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆದರೆ, ಪ್ರಕರಣ ದಾಖಲಾಗಿದ್ದರೂ ಆರೋಪಿ ಇನ್ನೂ ಬಂಧನವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಸ್ಥಳೀಯರು ಹಾಗೂ ಸಾರ್ವಜನಿಕರು ಆರೋಪಿಯನ್ನು ತಕ್ಷಣ ಬಂಧಿಸಿ, ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *