ಬಳ್ಳಾರಿಯ ಅಂದ್ರಾಳ್ ಪ್ರದೇಶದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಸುತ್ತಿಗೆಯಿಂದ ಹೊಡೆದು ಪತ್ನಿ ರಾಜೇಶ್ವರಿ ಹಾಗೂ 7 ತಿಂಗಳ ಮಗಳು ಅಶ್ವಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮಾತಿನ ಚಕಮಕಿ ತೀವ್ರಗೊಂಡ ವೇಳೆ ಆರೋಪಿ ಹೊನ್ನೂರಸ್ವಾಮಿ ಸುತ್ತಿಗೆಯಿಂದ ಇಬ್ಬರ ತಲೆಗೆ ಹೊಡೆದಿದ್ದು, ತಾಯಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

