Breaking News

ವಾಹನ ಅಡ್ಡಗಟ್ಟಿ ದರೋಡೆ: ಆರು ಮಂದಿ ಬಂಧನ

ಬೆಂಗಳೂರು ವರ್ತೂರು ಠಾಣೆ ಪೊಲೀಸರು ತಂಪು ಪಾನೀಯ ಹಾಗೂ ನೀರಿನ ಕ್ಯಾನ್ ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ₹50 ಸಾವಿರ ದರೋಡೆ ಮಾಡಿದ್ದ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 8 ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 25ರಂದು ಕೊಡತಿಯಿಂದ ರಾಯಸಂದ್ರ ಬಳಿ ಡೆಲಿವರಿ ವಾಹನವನ್ನು ತಡೆದು ಚಾಲಕನಿಗೆ ಬೆದರಿಕೆ ಹಾಕಿ ಹಣ ದೋಚಿ ಆರೋಪಿಗಳು ಪರಾರಿಯಾಗಿದ್ದರು. ಡೆಲಿವರಿ ಬಾಯ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೋಜು ಮಾಡಲು ಹಣಕ್ಕಾಗಿ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಕನನ್ನು ಸಹ ವಶಕ್ಕೆ ಪಡೆದು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *