Breaking News

ಕುಂದಾಪುರದಲ್ಲಿ ಗುಂಡಿಕ್ಕಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಹತ್ಯೆ

ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ಗುರುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಚರ್ಚ್‌ಗೆ ತೆರಳುತ್ತಿದ್ದ ವೇಳೆ ಹೋಲಿ ರೋಸರಿ ಚರ್ಚ್ ಸಮೀಪ ದುಷ್ಕರ್ಮಿ ಗುಂಡು ಹಾರಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರೋಪಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಕುಂದಾಪುರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮೃತರ ಸ್ನೇಹಿತನೇ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಬಳಿಕ ಕುಂದಾಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *