ರಾಯಚೂರು ತಾಲೂಕಿನ ಪಂಚಮುಖಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಗೆ ಮೊಬೈಲ್ ತರದಂತೆ ಬುದ್ಧಿವಾದ ಹೇಳಿದ ಮುಖ್ಯ ಶಿಕ್ಷಕಿ ಶಶಿಕಲಾ ಅವರ ಮೇಲೆ ವಿದ್ಯಾರ್ಥಿಯೊಬ್ಬ ಕಲ್ಲು ಹಿಡಿದು ದಾಳಿಗೆ ಮುಂದಾದ ಘಟನೆ ನಡೆದಿದೆ. ಮಾತಿನ ಚಕಮಕಿ ಬಳಿಕ ವಿದ್ಯಾರ್ಥಿ ಕಾರಿನತ್ತ ಕಲ್ಲು ಎಸೆಯಲು ಮುಂದಾಗಿದ್ದು, ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳಿಕ ಸ್ಥಳೀಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಪಂಚಾಯಿತಿ ನಡೆಸಿ ರಾಜಿ-ಸಂಧಾನದ ಮೂಲಕ ಪ್ರಕರಣ ಬಗೆಹರಿಸಲು ಪ್ರಯತ್ನಿಸಲಾಗಿದೆ. ಆದರೆ ಇಂತಹ ಗಂಭೀರ ಪ್ರಕರಣವನ್ನು ರಾಜಿ ಮೂಲಕ ಮುಚ್ಚಿಹಾಕಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಸಮಗ್ರ ತನಿಖೆ ನಡೆಸಿ, ಶಾಲೆಯಲ್ಲಿ ಶಿಸ್ತು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

