Breaking News

ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ, ಬೆದರಿಕೆ ಕೇಸಲ್ಲಿ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕುಂಜತ್ತಬೈಲ್ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಕುಟುಂಬಸ್ಥರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪ ಸಾಬೀತಾಗಿದೆ. ಪ್ರಕರಣದ ತನಿಖೆ ನಡೆಸಿದ್ದ ಕಂಕನಾಡಿ ನಗರ ಪೊಲೀಸರು ಸಲ್ಲಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯ ಈ ತೀರ್ಪು ನೀಡಿದ್ದು, ಪೋಕ್ಸೋ ಕಾಯ್ದೆ, ಬಿಎನ್‌ಎಸ್ ಹಾಗೂ ಐಟಿ ಕಾಯ್ದೆಯ ವಿವಿಧ ಕಲಂಗಳಡಿ ಶಿಕ್ಷೆ ವಿಧಿಸಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *