ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ 20 ವರ್ಷದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಆರೋಪಿಯನ್ನು ಕುಂಜತ್ತಬೈಲ್‌ನ ಸೋನು ಮ್ಯಾಕ್ಲೀನ್ ನೊರೊನ್ಹಾ ಎಂದು ಗುರುತಿಸಲಾಗಿದೆ. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿ ಪ್ರೀತಿಯ ಹೆಸರಿನಲ್ಲಿ ಬಾಲಕಿಯನ್ನು ನಂಬಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಆಕೆಯ ಖಾಸಗಿ ಚಿತ್ರಗಳನ್ನು ಸೆರೆಹಿಡಿದು ವೈರಲ್ ಮಾಡುವುದಾಗಿ ಹಾಗೂ ಬಾಲಕಿ ಮತ್ತು ಆಕೆಯ ಕುಟುಂಬದವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಕಂಕನಾಡಿ ಪಟ್ಟಣ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಬಿಎನ್‌ಎಸ್, ಪೋಕ್ಸೊ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

