Breaking News

ವರದಕ್ಷಿಣೆ ಕಿರುಕುಳದಿಂದ ಮನನೊಂದು ಪತ್ನಿ ಆತ್ಮಹತ್ಯೆ: ಪತಿ ಬಂಧನ

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸರು ಮಹಿಳೆಯ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರಾಯಸಂದ್ರದಲ್ಲಿ 20 ವರ್ಷದ ಸಾನಿಕ ಗೌಡ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗಳ ಸಾವಿಗೆ ಪತಿಯೇ ಕಾರಣ ಎಂದು ಆರೋಪಿಸಿರುವ ಸಾನಿಕ ಅವರ ತಂದೆ, ವರದಕ್ಷಿಣೆ ಕಿರುಕುಳ ಮತ್ತು ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸುಮಾರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಏಳು ತಿಂಗಳ ಮಗು ಇದೆ. ಪತಿಯ ಕಿರುಕುಳದಿಂದ ಬೇಸತ್ತ ಸಾನಿಕ ಕೆಲ ತಿಂಗಳ ಹಿಂದೆ ಮಗುವಿನೊಂದಿಗೆ ತವರು ಮನೆಗೆ ಬಂದು ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *