Breaking News

ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ‘ವಿನಯ್ ಕುಲಕರ್ಣಿ’ ಬಿಡುಗಡೆ

ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದರು. ಜೈಲಿನ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಹೊರಬಂದ ವಿನಯ್ ಕುಲಕರ್ಣಿ ಯಾವುದೇ ಮಾಧ್ಯಮ ಪ್ರತಿಕ್ರಿಯೆ ನೀಡದೆ ತೆರಳಿದರು. ಜೈಲಿನ ಹೊರಗೆ ಸೇರಿದ್ದ ಬೆಂಬಲಿಗರು ಅವರಿಗೆ ಹೂಮಾಲೆ ಹಾಕಿ ಸ್ವಾಗತಿಸಿ ಅಭಿನಂದಿಸಿದರು. ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಏಪ್ರಿಲ್‌ 2026ರಲ್ಲಿ ವಿನಯ್ ಕುಲಕರ್ಣಿ ಸೇರಿ ಹಲವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಜಾಮೀನು ಮಂಜೂರು ಮಾಡಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *