Breaking News

32 ಕೋಟಿ ರೂ. ಹಿಂತಿರುಗಿಸಲು ಆಗಲ್ಲ! ಸಾಲ ಕೊಟ್ಟವನ ಹತ್ಯೆಗೆ ಮಾಸ್ಟರ್​ಮೈಂಡ್ ರೂಪಿಸಿದ್ದ ಸಂಚು ಕಡೆಗೂ ಠುಸ್​

32 ಕೋಟಿ ರೂ. ಸಾಲ ತೀರಿಸುವುದನ್ನು ತಪ್ಪಿಸಿಕೊಳ್ಳಲು ಉದ್ಯಮಿಯ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿ, ಮಾಸ್ಟರ್‌ಮೈಂಡ್ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ. ವಸಾಯಿ ಮೂಲದ ಉದ್ಯಮಿ ಮೋಹನ್ ಸಿಂಗ್ ಪರ್ಮಾರ್ ಅವರನ್ನು ಗುರಿಯಾಗಿಸಿ ಈ ಸಂಚು ರೂಪಿಸಲಾಗಿತ್ತು. ಪ್ರಮುಖ ಆರೋಪಿ ಸಾಗರ್ ಗಿರೀಶ್ ಭಾನುಶಾಲಿ ಷೇರು ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸಿ ಸಾಲದ ಸುಳಿಯಲ್ಲಿ ಸಿಲುಕಿದ್ದ. ಸಾಲದಿಂದ ತಪ್ಪಿಸಿಕೊಳ್ಳುವುದರ ಜೊತೆಗೆ ಕಂಪನಿಯ ಸಂಪೂರ್ಣ ನಿಯಂತ್ರಣ ಪಡೆಯುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜುಲೈ 24ರಂದು ಪರ್ಮಾರ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸಿಸಿಟಿವಿ ದೃಶ್ಯಗಳು, ಕಾಲ್ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ದಾಳಿಕೋರರನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಿದ ಬೈಕ್‌ಗೆ ನಕಲಿ ನಂಬರ್‌ಪ್ಲೇಟ್ ಅಳವಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *