Breaking News

ಪತ್ನಿಯನ್ನು ಕೊಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಹಾಸನ ಜಿಲ್ಲೆಯ ಕೆಸಗೋಡು ಗ್ರಾಮದಲ್ಲಿ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಗಗನ (38) ಮತ್ತು ರಘು (41) ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಚಿಕ್ಕಮಗಳೂರಿನಲ್ಲಿ ಬೇಕರಿ ನಡೆಸುತ್ತಿದ್ದರು. ಶುಕ್ರವಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಘು ಪತ್ನಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಸಂಬಂಧಿಕರಿಗೆ ವಿಡಿಯೊ ಕರೆ ಮಾಡಿ ಕೃತ್ಯದ ಬಗ್ಗೆ ತಿಳಿಸಿದ ಆತ, ಮೃತದೇಹವನ್ನು ಯಗಚಿ ನಾಲೆಗೆ ಎಸೆದಿರುವುದಾಗಿ ಹೇಳಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿದು ಅರೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಗನ ಅವರ ಮೃತದೇಹಕ್ಕಾಗಿ ಯಗಚಿ ನಾಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *