Breaking News

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಡೆರಿಕ್‌ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಕುಂದಾಪುರದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿ ಡೆರಿಕ್‌ ಕ್ರಾಸ್ತಾನನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಆರೋಪಿಯ ಪತ್ತೆಗಾಗಿ ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಗುರುವಾರ ತಡರಾತ್ರಿ ಹಣಕಾಸು ಹಾಗೂ ಇತರ ವ್ಯವಹಾರಗಳ ವಿಚಾರವಾಗಿ ಉಂಟಾದ ಮನಸ್ತಾಪದ ಹಿನ್ನೆಲೆಯಲ್ಲಿ ಡೆರಿಕ್‌, ಐವನ್‌ ರಿಚರ್ಡ್‌ ಮಸ್ಕರೇನಸ್‌ ಅವರನ್ನು ಕುಂದಾಪುರದ ಚರ್ಚ್‌ ರಸ್ತೆಗೆ ಕರೆಸಿಕೊಂಡಿದ್ದಾನೆ. ಬಳಿಕ ಕಾರಿನಿಂದ ಇಳಿದ ಐವನ್‌ ಮೇಲೆ ಬಂದೂಕಿನಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್‌ ಸ್ಥಳದಲ್ಲೇ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಭಟ್ಕಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *