Breaking News

ಬಸ್ ಅಡ್ಡಗಟ್ಟಿ ಕಂಡಕ್ಟರ್‌ ಮೇಲೆ ಭೀಕರ ಹಲ್ಲೆ, ಪ್ರಯಾಣಿಕನ ಮೇಲೂ ಕಿಡಿಗೇಡಿ ಅಟ್ಯಾಕ್!

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಕರ್ತವ್ಯನಿರತ ಎನ್‌ಡಬ್ಲ್ಯೂಕೆಆರ್‌ಟಿಸಿ (NWKRTC) ಬಸ್ ನಿರ್ವಾಹಕ ಮಲ್ಲು ಲಮಾಣಿ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ನಡೆಸಿದೆ. ಹಳೆಯ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಶುಕ್ರವಾರ ಆಟೋವನ್ನು ರಸ್ತೆ ಬದಿಗೆ ಸರಿಸಿದ ವಿಚಾರಕ್ಕೆ ಆಟೋ ಚಾಲಕ ಸಂತೋಷ ದೇವೂರ ನಿರ್ವಾಹಕರೊಂದಿಗೆ ವಾಗ್ವಾದ ನಡೆಸಿದ್ದ. ಬಳಿಕ ಶನಿವಾರ ಬಸ್ ಅಡ್ಡಗಟ್ಟಿ ಸಹಚರರೊಂದಿಗೆ ಬಸ್ ಒಳಗೆ ನುಗ್ಗಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ನಿರ್ವಾಹಕ ಬಸ್ಸಿನಲ್ಲೇ ಕುಸಿದು ಬಿದ್ದಿದ್ದು, ಘಟನೆ ಚಿತ್ರೀಕರಿಸುತ್ತಿದ್ದ ಪ್ರಯಾಣಿಕನ ಮೇಲೆಯೂ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *