Breaking News

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಕಾರ್ಯದರ್ಶಿ ಜ್ಯೋತಿಗೆ ಸಿಐಡಿ ನೋಟಿಸ್ ಜಾರಿ!

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ತೀವ್ರಗೊಳಿಸಿದ್ದು, ಕಾರ್ಯದರ್ಶಿ ಜ್ಯೋತಿ ಅವರಿಗೆ ನೋಟಿಸ್ ನೀಡಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ವೈರಲ್ ಆದ ಭ್ರಷ್ಟಾಚಾರದ ಆಡಿಯೋ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಈ ನಡುವೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಎಬಿವಿಪಿ ಒತ್ತಾಯಿಸಿದ್ದು, ಆಗಸ್ಟ್‌ 4ರೊಳಗೆ ಕ್ರಮ ಕೈಗೊಳ್ಳದಿದ್ದರೆ ಆಗಸ್ಟ್‌ 5ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೊಂದೆಡೆ, ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕೆ ಒತ್ತಾಯಿಸಿದರೆ, ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿರುವ ಅಭ್ಯರ್ಥಿಗಳು “ಕಡಿಮೆ ಅಂಕ ಬಂದ ಕಾರಣಕ್ಕೆ ಅಲ್ಲ, ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *