Breaking News

ಹಾವೇರಿಯಲ್ಲಿ ಅಮಾನವೀಯ ಕೃತ್ಯ: 9ಕ್ಕೂ ಹೆಚ್ಚು ಶ್ವಾನಗಳನ್ನ ಹತ್ಯೆಗೈದು ವಾಮಾಚಾರ ಮಾಡಿದ ದುಷ್ಕರ್ಮಿಗಳು!

ಹಾವೇರಿ: ಜಿಲ್ಲೆಯ ಸವಣೂರು ತಾಲೂಕಿನ ಮಂಟಗಣಿ, ಕಳಸೂರು, ಹತ್ತಿಮತ್ತೂರು ಹಾಗೂ ಕಲ್ಲಕೋಟಿ ಗ್ರಾಮಗಳ ಸಂಪರ್ಕ ರಸ್ತೆಗಳ ಬಳಿ 9ಕ್ಕೂ ಹೆಚ್ಚು ಶ್ವಾನಗಳನ್ನು ಕೊಂದು ಅವುಗಳ ಮೇಲೆ ವಾಮಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಶ್ವಾನಗಳ ಬಾಯಿಯನ್ನು ದಾರದಿಂದ ಕಟ್ಟಿ, ಕೋಳಿಯ ರೆಕ್ಕೆ ಹಾಗೂ ಕುಂಕುಮ ಬಳಸಿ ಕೃತ್ಯ ಎಸಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಐದು ಹೆಣ್ಣು ಹಾಗೂ ನಾಲ್ಕು ಗಂಡು ಶ್ವಾನಗಳನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು, ಜಮೀನಿಗೆ ತೆರಳಿದ್ದ ರೈತರು ಮತ್ತು ಸಾರ್ವಜನಿಕರು ಮೃತದೇಹಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಗ್ರಾಮಸ್ಥರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *