Breaking News

ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ ಆರೋಪ -ದಾವಣಗೆರೆಯಲ್ಲಿ ಇವತ್ತು ಏನಾಯ್ತು?

ದಾವಣಗೆರೆ: ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ದಲಿತ ಯುವಕರ ಮೇಲೆ ಹಲ್ಲೆ ನಡೆದ ಆರೋಪ ಕೇಳಿಬಂದಿದ್ದು, ಈ ಸಂಬಂಧ 42 ಜನರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆ ಬಳಿಕ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಎಸ್‌ಪಿ ಶೇಖರ್ ಹೆಚ್.ಟಿ ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ನಡೆಸಿದರು. ಅವರ ಸಮ್ಮುಖದಲ್ಲೇ ದಲಿತ ಸಮುದಾಯದ ಮಹಿಳೆಯರು ಮತ್ತು ಯುವಕರು ದೇವಸ್ಥಾನ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದು, ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *