ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ ಅಗೆಯಲು ನಿರಾಕರಿಸಿದ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುಡಿಯುವ ನೀರು, ಜಮೀನಿಗೆ ಹೋಗುವ ದಾರಿ ತಡೆ, ದಲಿತ ಓಣಿಯಲ್ಲಿ ಕಾರ್ಯಕ್ರಮ ನಡೆದಾಗ ವಿದ್ಯುತ್ ಸಂಪರ್ಕ ಕಡಿತ ಹಾಗೂ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಸಮಗ್ರ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

