Breaking News

ಬಸ್‌ನಲ್ಲಿ ಅಶ್ಲೀಲ ವರ್ತನೆ ಆರೋಪ; ಪ್ರಕರಣ ದಾಖಲು

ಬಂಟ್ವಾಳ: ಬಿ.ಸಿ.ರೋಡ್‌ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣದ ವೇಳೆ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ ಸುಮಾರು 60ರಿಂದ 70 ವರ್ಷದೊಳಗಿನ ವ್ಯಕ್ತಿಯೊಬ್ಬರು ಬಿ.ಸಿ. ರೋಡ್ ನಲ್ಲಿ ಬಸ್ ಹತ್ತಿ ಚಾಲಕರ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತು ಬಳಿಕ ಮೆಲ್ಕಾರ್ ಜಂಕ್ಷನ್‌ನಲ್ಲಿ ಇಳಿದಿದ್ದರು. ಈ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಚಾಲಕರ ಬಳಿ ಬಂದು, ವ್ಯಕ್ತಿಯು ಪ್ರಯಾಣಿಕರಿಗೆ ಕಾಣುವ ರೀತಿಯಲ್ಲಿ ತನ್ನ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿದ್ದಾನೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೀಡಿಯೊ ಸೇರಿದಂತೆ ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *